Saturday, 23rd November 2024

29,689 ಕೋವಿಡ್ ಪ್ರಕರಣಗಳು ದೃಢ

#corona

ನವದೆಹಲಿ: ದೇಶದಲ್ಲಿ ಪ್ರತಿ ದಿನ ವರದಿಯಾಗುತ್ತಿರುವ ಹೊಸ ಕೋವಿಡ್ ಪ್ರಕರಣಗಳಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಇದೇ ಮೊದಲ ಬಾರಿಗೆ ದೈನಂದಿನ ಪ್ರಕರಣಗಳ ಸಂಖ್ಯೆ 30 ಸಾವಿರಕ್ಕಿಂತ ಕಡಿಮೆ ವರದಿಯಾಗಿದೆ.

ಮಂಗಳವಾರ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 29,689 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 415 ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 3,14,40,951 ತಲುಪಿದೆ. ಮೃತರ ಸಂಖ್ಯೆ 4,21,382ಕ್ಕೆ ಏರಿಕೆಯಾಗಿದೆ. 3,06,21,469 ಸೋಂಕಿತರು ಗುಣ ಮುಖರಾಗಿದ್ದಾರೆ.

ಸದ್ಯ 3,98,100 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನ 42,363 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಈವರೆಗೆ 44,19,12,395 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.