Saturday, 14th December 2024

ಮನೆಯ ಮೇಲ್ಚಾವಣಿ ಕುಸಿದು, ಮೂವರ ಸಾವು

ನವದೆಹಲಿ: ದೆಹಲಿಯ ವಿಷ್ಣು ಗಾರ್ಡೆನ್ ಪ್ರದೇಶದಲ್ಲಿ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದ್ದು, ಮೂವರು ಸ್ಥಳದಲ್ಲೇ  ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮನೆ ಅತ್ಯಂತ ಹಳೆಯ ಕಟ್ಟಡವಾಗಿದ್ದು, ಕಾರ್ಖಾನೆಯಾಗಿ ಬಳಕೆ ಮಾಡಲಾಗುತ್ತಿತ್ತು ಹೇಳಲಾಗುತ್ತಿದೆ.