Sunday, 15th December 2024

ಪ್ರತಿ ತಿಂಗಳು 300 ಯುನಿಟ್ ಉಚಿತ ವಿದ್ಯುತ್: ಆಮ್ ಆದ್ಮಿ ಪಕ್ಷ

ಸೂರತ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು 300 ಯುನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಯಾವುದೇ ಅಡಚಣೆಯಿಲ್ಲದೆ ನಿರಂತರ ವಿದ್ಯುತ್ ಪೂರೈಕೆಯ ಭರವಸೆ ನೀಡಿದರು. ಜುಲೈ ತಿಂಗಳಲ್ಲಿ ಎರಡನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿ ರುವ ಕೇಜ್ರಿವಾಲ್, ಇದರಲ್ಲಿ ಯಾವುದೇ ತಪ್ಪು ಕಂಡುಬಂದರೆ ಮುಂದಿನ ಚುನಾವಣೆಯಲ್ಲಿ ಎಎಪಿಗೆ ಮತ ಹಾಕದಿರಲು ನೀವು ಸ್ವತಂತ್ರರು.

ಬಾಕಿ ಉಳಿದಿರುವ 2021 ಡಿಸೆಂಬರ್ 31ರ ಮೊದಲಿನ ಎಲ್ಲ ವಿದ್ಯುತ್ ಬಿಲ್‌ಗಳನ್ನು ಮನ್ನಾ ಮಾಡಲಾಗುವುದು ಎಂದೂ ಭರವಸೆ ನೀಡಿದರು. ಗುಜರಾತ್‌ನಲ್ಲಿ ಡಿಸೆಂಬರ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ದೆಹಲಿ ಹಾಗೂ ಪಂಜಾಬ್ ಬಳಿಕ ಗುಜರಾತ್ ಮೇಲೆ ಎಎಪಿ ಕಣ್ಣು ನೆಟ್ಟಿದೆ.

ಆಡಳಿತರೂಢ ಬಿಜೆಪಿ ವಿರುದ್ಧವು ವಾಗ್ದಾಳಿ ನಡೆಸಿರುವ ಕೇಜ್ರಿವಾಲ್, ಜನಸಾಮಾನ್ಯರು 27 ವರ್ಷಗಳ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ ಎಂದು ಟೀಕಿಸಿದರು. ಭ್ರಷ್ಟಾಚಾರವನ್ನು ತೊಡೆದು ಹಾಕಿದರೆ ಗುಜರಾತ್‌ನಲ್ಲಿ ವಿದ್ಯುತ್ ಉಚಿತವಾಗಿ ನೀಡಲು ಸಾಧ್ಯ ಎಂದು ಹೇಳಿದರು.