Thursday, 12th December 2024

30,256 ಹೊಸ ಕೋವಿಡ್‌ ಪ್ರಕರಣಗಳು ದೃಢ

#corona

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 30,256 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 295 ಜನರು ಮೃತಪಟ್ಟಿದ್ದಾರೆ.

ಇದರೊಂದಿಗೆ ಪ್ರಕರಣಗಳ ಸಂಖ್ಯೆ 3,34,78,419 ಕ್ಕೆ ಏರಿಕೆಯಾಗಿದೆ. 4,45,133 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 3,27,15,105 ಮಂದಿ ಗುಣಮುಖ ರಾಗಿದ್ದಾರೆ. ಸದ್ಯ 3,18,181 ಸಕ್ರಿಯ ಪ್ರಕರಣಗಳಿವೆ.

ಭಾನುವಾರದ ಒಂದೇ ದಿನ ದೇಶದಲ್ಲಿ 11,77,607 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ. ಲಸಿಕೆ ಪಡೆದುಕೊಂಡವರ ಸಂಖ್ಯೆ 80,85,68,144ಕ್ಕೆ ಏರಿಕೆಯಾಗಿದೆ.