Wednesday, 27th November 2024

30,757 ಹೊಸ ಸೋಂಕು ಪ್ರಕರಣ ಪತ್ತೆ

covid

ನವದೆಹಲಿ: ಕರೋನಾದ 3ನೇ ಅಲೆಯಲ್ಲಿರುವ ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 30,757 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.

ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 30,757 ಹೊಸ ಸೋಂಕು ಪ್ರಕರಣಗಳು ದಾಖಲಾಗಿದೆ. ಇದೇ ಅವಧಿಯಲ್ಲಿ ಕೋವಿಡ್ ನಿಂದಾಗಿ 541 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,27,54,315ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,10,413ಕ್ಕೆ ಏರಿಕೆ ಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,32,918ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 67,538 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,19,10,984ಕ್ಕೆ ತಲುಪಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,74,24,36,288 ಜನರಿಗೆ ಲಸಿಕೆ ನೀಡಲಾಗಿದೆ.