Wednesday, 9th October 2024

30,948 ಮಂದಿಗೆ ಹೊಸದಾಗಿ ಸೋಂಕು

#covid

ನವದೆಹಲಿ : ಭಾರತದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, 30,948 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 30,948 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ : 3,24,24,234 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.

ಸೋಂಕಿನಿಂದ 403 ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,34,367 ಕ್ಕೆ ಏರಿಕೆಯಾಗಿದೆ. ಸದ್ಯ 2,53,398 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಒಟ್ಟು ಪ್ರಕರಣಗಳು: 3,24,24,234 ಇದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3,16,36,469 ಇದೆ.