ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 31,923 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,35,31,498 ಕೋಟಿಗೆ ಏರಿಕೆಯಾಗಿದೆ.
ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,01,604ಕ್ಕೆ ಇಳಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 282 ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ.
ಕೇರಳದಲ್ಲಿ 19,675 ಕೋವಿಡ್ ಪ್ರಕರಣ ವರದಿಯಾಗಿ, 142 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,46,050ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ 83.39 ಕೋಟಿ ಡೋಸ್ ನೀಡಲಾಗಿದೆ ಎಂದು ವರದಿ ಹೇಳಿದೆ. ಕಳೆದ 24ಗಂಟೆಗಳಲ್ಲಿ 31,990 ಮಂದಿ ಚೇತರಿಸಿಕೊಂಡಿದ್ದಾರೆ.