ನವದೆಹಲಿ: ದೇಶದಲ್ಲಿ ಸೋಮವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 32,937 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 417 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 3,22,25,513ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,31,642ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,81,947ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
35,909 ಮಂದಿ ಗುಣಮುಖರಾಗುವುದರೊಂದಿಗೆ, ಚೇತರಿಸಿಕೊಂಡವರ ಸಂಖ್ಯೆ 3,14,11,924ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯ ವರೆಗೂ ಒಟ್ಟಾರೆ 54,58,57,108 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.