Monday, 9th December 2024

3,324 ಹೊಸ ಕೋವಿಡ್ ಪ್ರಕರಣ ಪತ್ತೆ

covid

ನವದೆಹಲಿ: ಭಾರತದಲ್ಲಿ ಹೊಸ ಕೋವಿಡ್‌ ಗಳಲ್ಲಿ ಏರಿಕೆ ಕಂಡುಬಂದಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 19,092 ಆಗಿದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,324 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 40 ಜನರು ಮೃತಪಟ್ಟಿದ್ದಾರೆ. ಭಾರತದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,30,79,188 ಆಗಿದೆ. ಒಟ್ಟು ಮೃತಪಟ್ಟವರ ಸಂಖ್ಯೆ 5,23,843 ಆಗಿದೆ. 24 ಗಂಟೆಯಲ್ಲಿ ದೇಶದಲ್ಲಿ 4,71,087 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ.

ಲಸಿಕೆ ನೀಡುವುದನ್ನು ವೇಗಗೊಳಿಸಲು ನಾವು ತೀರ್ಮಾನಿಸಿದ್ದೇವೆ. ಮಕ್ಕಳಿಗೆ ಲಸಿಕೆ ನೀಡುವುದಕ್ಕೆ ಹೆಚ್ಚಿನ ಗಮನವನ್ನು ನೀಡಲಾಗಿದೆ” ಎಂದು ತಿಳಿಸಿದರು.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಮತ್ತೆ ಕೋವಿಡ್‌ನಿಂದ ಮುಕ್ತವಾಗಿದೆ. ಏಪ್ರಿಲ್ 23ರಂದು ಒಂದು ಹೊಸ ಪ್ರಕರಣ ದಾಖಲಾಗಿತ್ತು. ತಮಿಳುನಾಡಿನಲ್ಲಿ ಶನಿವಾರ 49 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ.