Saturday, 23rd November 2024

33,376 ಕರೋನಾ ಪ್ರಕರಣಗಳು ದೃಢ, 308 ಮಂದಿ ಸಾವು

#corona

ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 33,376 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 308 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಒಟ್ಟು ಸೋಂಕಿತರ ಸಂಖ್ಯೆ 3,32,08,330ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,42,317ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,91,516ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 32,198 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,23,74,497ಕ್ಕೆ ತಲುಪಿದೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆ ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 73,05,89,688 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.