Monday, 11th November 2024

ಕರೋನಾ ಬ್ರೇಕಿಂಗ್: 34,113 ಜನರಲ್ಲಿ ಸೋಂಕು ಪತ್ತೆ

#corona

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 34,113 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 346 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,09,011 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,78,882 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 91,930 ಜನರು ಕೋವಿಡ್ ನಿಂದ ಗುಣಮುಖ ರಾಗಿದ್ದಾರೆ. ದೇಶದಲ್ಲಿ ಈವರೆಗೆ 4,16,77,641 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 1,72,95,87,490 ಜನರಿಗೆ ಲಸಿಕೆ ಹಾಕಲಾಗಿದೆ. ಭಾನುವಾರ 10,67,908 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.