Thursday, 14th November 2024

3,46,786 ಜನರಲ್ಲಿ ಸೋಂಕು ಪತ್ತೆ

#corona

ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ದಾಖಲೆ ಪ್ರಮಾಣದಲ್ಲಿ ಕರೋನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,46,786 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ 1,66,10,481ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 25,52,940 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,38,67,997 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,19,838 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.