Sunday, 19th May 2024

ಕರೋನಾ ಏರಿಳಿತ: 35,499 ಮಂದಿಯಲ್ಲಿ ಸೋಂಕು ಪತ್ತೆ

#covid

ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಏರಿಳಿತ ಮುಂದುವರೆದಿದೆ. ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 35,499 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 447 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 3,19,69,954ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,28,309ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,02,188ಕ್ಕೆ ತಲುಪಿದೆ. ಈ ನಡುವೆ 43,910 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,10,99,771ಕ್ಕೆ ತಲುಪಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 50,86,64,759 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!