Thursday, 12th December 2024

36,083 ಜನರಲ್ಲಿ ಸೋಂಕು ಪತ್ತೆ

#corona

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,083 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 493 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 431225 ಕ್ಕೆ ಏರಿಕೆಯಾಗಿದೆ. 385336 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 37927 ಜನರು ಗುಣಮುಖರಾಗಿದ್ದಾರೆ.

19,23,863 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 73,50,553 ಜನರಿಗೆ ಲಸಿಕೆ ನೀಡಲಾಗಿದೆ. ಈವರೆಗೆ ಒಟ್ಟು 54,38,46,290 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.