Sunday, 15th December 2024

ಕರೋನಾ ಸೋಂಕು: 3,714 ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಸೋಂಕು ಏರಿಳಿಕೆ ಮುಂದುವರೆದಿದೆ.

ಮಂಗಳವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 3,714 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 7 ಮಂದಿ  ಮೃತಪಟ್ಟಿದ್ದಾರೆ. ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,85,049ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಮೃತಪಟ್ಟಿರುವವರ ಸಂಖ್ಯೆ 5,24,708ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 26,976ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 2,513 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,33,365ಕ್ಕೆ ತಲುಪಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,94,27,16,543 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.