ನವದೆಹಲಿ: ಓಮೈಕ್ರಾನ್ ಭೀತಿ ನಡುವೆಯೇ ದೇಶದಲ್ಲಿ ಕ್ರಮೇಣ ಕೋವಿಡ್-19 ಸೋಂಕು ಉಲ್ಬಣವಾಗು ತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 37,379 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 124 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಆ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 4,82,017ಕ್ಕೆ ಏರಿಕೆಯಾಗಿದೆ.
ದೇಶದಲ್ಲಿನ ದೈನಂದಿನ ಸೋಂಕು ಸಕಾರಾತ್ಮಕ ದರ ಕೂಡ ಏರಿಕೆಯಾಗಿದ್ದು, ಪ್ರಸ್ತುತ ದೇಶದಲ್ಲಿನ ಸೋಂಕು ಸಕಾರಾತ್ಮಕ ದರ ಶೇ.3.24ಕ್ಕೆ ಏರಿಕೆ ಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 11,007 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 3,43,06,414ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಪ್ರಸ್ತುತ 1,71,830 ಸಕ್ರಿಯ ಪ್ರಕರಣಗಳಿವೆ ಎನ್ನಲಾಗಿದೆ.
ಲಸಿಕೆ ಅಭಿಯಾನ ಮುಂದುವರೆದಿದ್ದು, ಈ ವರೆಗೂ ಒಟ್ಟಾರೆ 1,46,70,18,464 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.