ನವದೆಹಲಿ: ಭಾರತದಲ್ಲಿ ಕರೋನಾ ಏರಿಳಿಕೆ ಎಂದಿನಂತೆ ಮುಂದುವರೆದಿದೆ. ಬುಧವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 37,593 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 648 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 3,25,12,366ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,35,758ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,22,327ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 34,169 ಮಂದಿ ಗುಣಮುಖರಾಗುವುದರೊಂದಿಗೆ, ಚೇತರಿಸಿಕೆಯ ಸಂಖ್ಯೆ 3,17,54,281ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 59,55,04,593 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.