ನವದೆಹಲಿ: ದೇಶದಲ್ಲಿ ಬುಧವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 38,353 ಕೋವಿಡ್ ಪ್ರಕರಣ ಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 497 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಇದು ಕಳೆದ 140 ದಿನಗಳಲ್ಲೇ ದಾಖಲಾದ ಕನಿಷ್ಠ ಸಂಖ್ಯೆಯಾಗಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,20,36,511ಕ್ಕೆ ತಲುಪಿದ್ದು, ಮೃತರ ಸಂಖ್ಯೆ 4,29,125ಕ್ಕೆ ಏರಿಕೆ ಯಾಗಿದೆ. ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,86,351ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
24 ಗಂಟೆಗಳಲ್ಲಿ 40,013 ಮಂದಿ ಗುಣಮುಖರಾಗುವುದರೊಂದಿಗೆ, ಚೇತರಿಸಿಕೊಂಡವರ ಸಂಖ್ಯೆ 3,12,20,981ಕ್ಕೆ ತಲುಪಿದೆ. ಭಾರತದಲ್ಲಿ ಒಂದೇ 17,77,962 ಮಂದಿಯನ್ನು ಕರೋನಾ ಪರೀಕ್ಷೆ ಗೊಳಪಡಿಸಲಾಗಿದ್ದು, 48,50,56,507 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 51.90 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ