Sunday, 15th December 2024

38,628 ಮಂದಿಯಲ್ಲಿ ಹೊಸದಾಗಿ ಕರೋನಾ ಸೋಂಕು ಪತ್ತೆ

#corona

ನವದೆಹಲಿ: ದೇಶದಲ್ಲಿ ಶನಿವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 38,628 ಮಂದಿಯಲ್ಲಿ ಹೊಸದಾಗಿ ಕರೋನಾ ಸೋಂಕು ಪತ್ತೆಯಾಗಿದ್ದು, 617 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಶನಿವಾರದ ಒಟ್ಟು ಸೋಂಕಿತರ ಸಂಖ್ಯೆ 3,18,95,385ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,27,371ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಏರಿಕೆಯಾಗು ತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,12,153ಕ್ಕೆ ತಲುಪಿದೆ ಎಂದು ದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ನಡುವೆ 0,017 ಮಂದಿ ಗುಣಮುಖರಾಗುವುದರೊಂದಿಗೆ, ಚೇತರಿಸಿಕೊಂಡವರ ಸಂಖ್ಯೆ 3,10,55,861ಕ್ಕೆ ತಲುಪಿದೆ. ಒಂದೇ 16,40,287 ಮಂದಿಯನ್ನು ಕರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 47,65,33,650 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಒಟ್ಟಾರೆ 50,10,09,609 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.