Saturday, 23rd November 2024

38,792 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 38,792 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 624 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ಸೋಂಕಿಗೆ ಬಲಿಯಾದವರ ಸಂಖ್ಯೆ 4,11,408ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 4,29,946 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 41,000 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30104720 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಈವರೆಗೆ 43,59,73,639 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಕಳೆದ 24ಗಂಟೆಯಲ್ಲಿ 37,14,441 ಜನರಿಗೆ ವ್ಯಾಕ್ಸಿನ್ ಹಾಕಲಾಗಿದೆ. ದೇಶ ದಲ್ಲಿ ಈವರೆಗೆ 38,76,97,935 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಪ್ರತಿನಿತ್ಯ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಕಾರಣ ಕೇರಳ ಸರ್ಕಾರ ವಾರಾಂತ್ಯದ ದಿನವಾದ ಜು.17 ಹಾಗೂ 18 ರಂದು ಕಂಪ್ಲೀಟ್‌ ಲಾಕ್‌ ಡೌನ್‌ ಘೋಷಿಸಿದೆ. ನವದೆಹಲಿಯಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನ 76 ಪ್ರಕರಣಗಳು ಪತ್ತೆಯಾಗಿವೆ.