ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 389 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,71,219ಕ್ಕೆ ಏರಿಕೆಯಾಗಿದೆ.
ಅಲ್ಲದೇ, ಕೋವಿಡ್ ನಿಂದ ಮೃತಪಡುವವರ ಒಟ್ಟು ಸಂಖ್ಯೆ 5,30,608ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,395ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 506 ಮಂದಿ ಗುಣ ಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,35,216ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 2,67,170 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,50,18,779 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,199,028,193 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.