Saturday, 14th December 2024

39,070 ಜನರಲ್ಲಿ ಕರೋನಾ ಸೋಂಕು ಪತ್ತೆ

#corona

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 39,070 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,19,34,455ಕ್ಕೆ ಏರಿಕೆಯಾಗಿದೆ.

491 ಜನರು ಮಹಾಮಾರಿಗೆ ಬಲಿಯಾಗಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 4,27,862ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 406822 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 43910 ಜನರು ಗುಣಮುಖರಾಗಿದ್ದಾರೆ. ಈವರೆಗೆ 31099771 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಶನಿವಾರ ದೇಶದಲ್ಲಿ 17,22,221 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 55,91,657 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 50,68,10,492 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.