Sunday, 13th October 2024

ಕರೋನಾ ಬ್ರೇಕಿಂಗ್: 39,097 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 39,097 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,13,32,159ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 546 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,20,016ಕ್ಕೆ ಏರಿಕೆಯಾಗಿದೆ. ಇನ್ನು 4,08,977 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 35,087 ಜನರು ಗುಣಮುಖರಾಗಿದ್ದಾರೆ. ಈವರೆಗೆ 3,05,03,166 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಈವರೆಗೆ 42,78,82,261 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. 24ಗಂಟೆಯಲ್ಲಿ 42,67,799 ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 42,78,82,261 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.