Saturday, 7th September 2024

3,962 ಮಂದಿಗೆ ಹೊಸದಾಗಿ ಸೋಂಕು ದೃಢ

#corona

ನವದೆಹಲಿ : ದೇಶದಲ್ಲಿ ಶನಿವಾರ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 3,962 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 26 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಮಹಾಮಾರಿಗೆ ಬಲಿಯಾದವರ ಸಂಖ್ಯೆ 524677 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,962 ಹೊಸ ಪ್ರಕರಣಗಳು, 2,697 ಚೇತರಿಕೆಗಳು ಮತ್ತು 26 ಸಾವುಗಳು ವರದಿಯಾಗಿವೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 22,416 ಕ್ಕೆ ಏರಿಕೆಯಾಗಿದೆ.

error: Content is protected !!