Sunday, 15th December 2024

ಕರೋನಾ ಸೋಂಕಿತರ ಸಂಖ್ಯೆ ಇಳಿಕೆ: 39,796 ಪ್ರಕರಣ ಪತ್ತೆ

#corona

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 39,796 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,05,85,229ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 723 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ಬಲಿಯಾದವರ ಸಂಖ್ಯೆ 4,02,728ಕ್ಕೆ ಏರಿಕೆಯಾಗಿದೆ. 4,82,071 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,97,00,430ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. 42,352 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈವರೆಗೆ 41,97,77,457 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. 35,28,92,046 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.