Saturday, 23rd November 2024

3,993 ಹೊಸ ಪ್ರಕರಣ ಪತ್ತೆ: 108 ಮಂದಿ ಸಾವು

#corona

ನವದೆಹಲಿ: ಮಹಾಮಾರಿ ಕರೋನಾ 3ನೇ ಅಲೆ ಪ್ರಭಾವ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,993 ಹೊಸ ಪ್ರಕರಣಗಳು ವರದಿಯಾಗಿದ್ದು, 108 ಮಂದಿ ಮೃತಪಟ್ಟಿದ್ದಾರೆ.

ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 49,948ಕ್ಕೆ ಇಳಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಕರೋನಾ ಸೋಂಕಿತರ ಸಂಖ್ಯೆ ಶೇ.0.12ರಷ್ಟಿದ್ದು, ಶೇಕಡಾ 98.68ರಷ್ಟು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕಳೆದ 24 ಗಂಟೆಗಳಲ್ಲಿ 8,055 ಮಂದಿ ಗುಣಮುಖರಾಗಿದ್ದು,  ಒಟ್ಟಾರೆ ಗುಣಮುಖರಾದವರ ಸಂಖ್ಯೆ 4 ಕೋಟಿಯ 24 ಲಕ್ಷದ 06 ಸಾವಿರದ 150ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 8 ಲಕ್ಷದ 73 ಸಾವಿರದ 395 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.