Friday, 13th December 2024

ಬಿಹಾರ ವಿಧಾನಸಭೆಯ ಅಂತಿಮ ಹಂತದ ಮತದಾನ ಆರಂಭ

ಪಟ್ನಾ: ಬಿಹಾರ ವಿಧಾನಸಭೆಯ ಮೂರನೇ ಮತ್ತು ಅಂತಿಮ ಹಂತದ ಮತದಾನ ಪ್ರಕ್ರಿಯೆ ಶನಿವಾರ ಆರಂಭವಾಗಿದೆ. 78 ಕ್ಷೇತ್ರ ಗಳಲ್ಲಿ ನಡೆಯುತ್ತಿರುವ ಮತದಾನವು ಬಿಹಾರ ಚುನಾವಣಾ ಫಲಿತಾಂಶದ ಮೇಲೆ ಭಾರೀ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಎಲ್ಲ ಮತದಾರರು ಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಬೇಕು. ಆ ಮೂಲಕ ಹೊಸ ಮತದಾನದ ದಾಖಲೆಯನ್ನು ಬರೆಯಬೇಕೆಂದು ವಿನಂತಿಸುತ್ತೇನೆ ಎಂದು ಮನವಿ ಮಾಡಿದ್ದಾರೆ.