Sunday, 15th December 2024

ಮೂರನೇ ಹಂತದ ಚುನಾವಣೆ: ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ

ನವದೆಹಲಿ: ಕರ್ನಾಟಕ ಸೇರಿದಂತೆ 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 94 ಲೋಕಸಭಾ ಕ್ಷೇತ್ರಗಳಿಗಾಗಿ ಮೇ 7 ರಂದು ನಡೆಯಲಿರುವ ಮೂರನೇ ಹಂತದ ಚುನಾವಣೆಗೆ ಏ. 12ರಂದು ಅಧಿಸೂಚನೆ ಹೊರಡಿಸುವು ದರೊಂದಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

3ನೇ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಏ.19 ಕೊನೆಯ ದಿನವಾಗಿದೆ. ಏ.20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಮೂರನೇ ಹಂತದಲ್ಲಿ ಕರ್ನಾಟಕ, ಅಸ್ಸಾಂ, ಬಿಹಾರ, ಚಂಡೀಗಢ, ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯು, ಗೋವಾ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಮತ್ತು ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ತಲಾ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಏ.26ರಂದು ಮೊದಲನೇ ಹಂತ ಮತ್ತು ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.