Sunday, 15th December 2024

ಗುಜರಾತಿನ ನಾಲ್ಕು ನಗರಗಳಲ್ಲಿ ನೈಟ್ ಕರ್ಫ್ಯೂ

ಅಹಮದಾಬಾದ್: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್ ಸರ್ಕಾರ ರಾಜ್ಯದ ನಾಲ್ಕು ಪ್ರಮುಖ ನಗರಗಳಲ್ಲಿ ನೈಟ್ ಕರ್ಫ್ಯೂ ಹೇರಿದೆ.

ಅಹಮದಾಬಾದ್, ಸೂರತ್, ವಡೋದರಾ ಮತ್ತು ರಾಜ್‌ಕೋಟ್‌ನಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಕರ್ಫ್ಯೂ ಜಾರಿಯಲ್ಲಿರು ತ್ತದೆ. ಈ ಮೊದಲು ಕರ್ಫ್ಯೂ ಸಮಯ ರಾತ್ರಿ 12ರಿಂದ ಬೆಳಿಗ್ಗೆ 6ರವರೆಗೆ ಇತ್ತು.

ಮುಖ್ಯಮಂತ್ರಿ ವಿಜಯ್ ರೂಪಾನಿ ನೇತೃತ್ವದ ಕೊರೋನಾ ವೈರಸ್ ಕಾರ್ಯಪಡೆಯ ಪ್ರಮುಖ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಾ.31ರವರೆಗೆ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.