Sunday, 1st December 2024

ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಹತ

ಪುಲ್ವಾಮ: ದಕ್ಷಿಣ ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

ಖಚಿತ ಮಾಹಿತಿ ಆಧಾರದ ಮೇಲೆ ಪೊಲೀಸರು, ಪುಲ್ವಾಮಾದ ಪೂಚಲ್ ಪ್ರದೇಶದಲ್ಲಿ 55 ಆರ್‌ಆರ್ ಮತ್ತು ಸಿಆರ್‌ಪಿಎಫ್ ತಂಡ ಜಂಟಿಯಾಗಿ ಕಾರ್ಯಾಚರಣೆ ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರಿಗೆ ದಿಟ್ಟ ಉತ್ತರ ನೀಡಿದ್ದಾರೆ. ಉಗ್ರರು ಅಡಗಿರುವುದನ್ನು ಖಚಿತಪಡಿಸಿಕೊಂಡ ಭದ್ರತಾ ಪಡೆಗಳು ಮೊದಲಿಗೆ ಶರಣಾಗುವ ಅವಕಾಶವನ್ನು ನೀಡಿದ್ದಾರೆ. ಉಗ್ರರು ಈ ಅವಕಾಶವನ್ನು ನಿರಾಕರಿಸಿದ್ದಾರೆ. ಬಳಿಕ ಎನ್ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್ನಲ್ಲಿ ಮತ್ತೊಂದು ಕಾರ್ಯಾಚರಣೆ ನಡೆಸಿದ್ದಾರೆ. ಇದರಲ್ಲಿ ಇಬ್ಬರು ಎಲ್‌ಇಟಿ ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.