Wednesday, 11th December 2024

40,120 ಮಂದಿಗೆ ಕರೋನಾ ಸೋಂಕು ದೃಢ

#covid

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 40,120 ಮಂದಿಗೆ ಸೋಂಕು ದೃಢಪಟ್ಟಿದೆ.

ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,21,17,826 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.

ಕರೋನಾ ಸೋಂಕಿಗೆ 585 ಮಂದಿ ಮೃತಪಟ್ಟಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 4,30,254 ಕ್ಕೆ ಏರಿಕೆಯಾಗಿದೆ. ಗುರುವಾರ ಒಂದೇ ದಿನ ದೇಶದಲ್ಲಿ ಕೊರೊನಾ ಸೋಂಕಿನಿಂದ 42,295 ಸೋಂಕಿತರು ಗುಣಮುಖರಾಗಿದ್ದಾರೆ.

ಈ ಮೂಲಕ ಕರೋನಾದಿಂದ 3,13,02,345 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.