Thursday, 12th December 2024

40,135 ವೈರಸ್ ಸೋಂಕಿನ ಪ್ರಕರಣಗಳು ಪತ್ತೆ

ನವದೆಹಲಿ : ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 40,135 ಮಂದಿಗೆ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

ಕಳೆದ 24 ಗಂಟೆಯಲ್ಲಿ 40,135 ಮಂದಿಗೆ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3,16,95,958 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ.

422 ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 4,24,773 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 36,946 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಒಟ್ಟು 3,08,57,467 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.