ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 403 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಸಕ್ರಿಯ ಪ್ರಕರಣ ಗಳು 4,972 ಕ್ಕೆ ಇಳಿದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಭಾನುವಾರ ನವೀಕರಿಸಿವೆ.
ಐದು ಸಾವುಗಳೊಂದಿಗೆ ಸಾವಿನ ಸಂಖ್ಯೆ 5,31,864 ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳಲ್ಲಿ 0.01 ಪ್ರತಿಶತವನ್ನು ಒಳಗೊಂಡಿವೆ. ಆದರೆ, ರಾಷ್ಟ್ರೀಯ COVID-19 ಚೇತರಿಕೆ ದರವು 98.80 ಪ್ರತಿಶತದಷ್ಟು ದಾಖಲಾಗಿದೆ ಎಂದು ಸಚಿವಾಲಯದ ವೆಬ್ಸೈಟ್ ತಿಳಿಸಿದೆ.
ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,44,52, 908 ಕ್ಕೆ ಏರಿದೆ. ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 220.66 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.