Sunday, 13th October 2024

406 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 406 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 12 ಮಂದಿ ಮೃತಪಟ್ಟಿದ್ದು, ದೇಶದಲ್ಲಿ ಈವರೆಗೆ 5,30,586 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ಕೇರಳ ಬಳಿಕ ರಾಜಸ್ಥಾನದಲ್ಲಿ ಒಂದು ಸಾವಿನ ಪ್ರಕರಣ ವರದಿಯಾಗಿದೆ.

ದೇಶದಲ್ಲಿ 6,402 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.79ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,32,433 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 2,19,86,38,566 ಡೋಸ್ ಲಸಿಕೆ ಹಾಕಲಾಗಿದೆ.