Sunday, 28th April 2024

ಕರೋನಾ ಇಳಿಕೆ: 408 ಹೊಸ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 408 ಹೊಸ ಪ್ರಕರಣ ಪತ್ತೆ ಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,70,483ಕ್ಕೆ ಏರಿಕೆಯಾಗಿದೆ.
ಕೋವಿಡ್ ನಿಂದ ಮೃತಪಡುವವರ ಒಟ್ಟು ಸಂಖ್ಯೆ 5,30,601ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗು ತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,881ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 568 ಮಂದಿ ಗುಣಮುಖ ರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,34,001ಕ್ಕೆ ತಲುಪಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,88,78,448 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.
error: Content is protected !!