Friday, 22nd November 2024

ದೇಶದಲ್ಲಿ 40,845 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಈವರೆಗೆ ಒಟ್ಟು 40,845 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಸೋಮವಾರ ತಿಳಿಸಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 3,129ಕ್ಕೆ ಏರಿಕೆಯಾಗಿದೆ.

ಒಟ್ಟು ಕೋವಿಡ್ ಸೋಂಕಿತ 34,940 ರೋಗಿಗಳಲ್ಲಿ 26,187 ಮಂದಿ ಮಧುಮೇಹದಿಂದ ಬಳಲುತ್ತಿದ್ದು, 21,523 ಮಂದಿ ಸ್ಟಿರಾಯ್ಡ್ ನಿಂದ ಸೋಂಕಿಗೆ ಒಳಗಾಗಿರುವುದಾಗಿ ವಿವರಿಸಿದ್ದಾರೆ. ಒಟ್ಟು 13,083 ರೋಗಿಗಳು 18-45 ವರ್ಷ ವಯಸ್ಸಿನವರಾಗಿದ್ದಾರೆ, 17,464 ಜನರು 45-60 ವರ್ಷ ವಯಸ್ಸಿನವ ರಾಗಿದ್ದಾರೆ. 10,082 ರೋಗಿಗಳು 60ಕ್ಕಿಂತ ಹೆಚ್ಚಿನ ವಯಸ್ಸಿನವರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಲಸಿಕೆ ತಯಾರಕರು ಉತ್ಪಾದಿಸುತ್ತಿರುವ ಶೇ.75ರಷ್ಟು ಲಸಿಕೆಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸುತ್ತಿರುವುದಾಗಿ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.