Wednesday, 11th December 2024

ತೈಲ ದರ: ಪ್ರತಿ ಲೀಟರಿಗೆ 40 ಪೈಸೆ ಏರಿಕೆ

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಳ ವಾಗುತ್ತಿದ್ದು, ಸೋಮವಾರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 13 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 8.40 ರೂ.ಹೆಚ್ಚಳವಾಗಿದೆ.

ಸೋಮವಾರ ಪ್ರತಿ ಲೀಟರ್ಗೆ 40 ಪೈಸೆ ಏರಿಕೆಯಾಗಿದ್ದು, ಇಲ್ಲಿಯವರೆಗೆ 14 ದಿನಗಳಲ್ಲಿ ಪ್ರತಿ ಲೀಟರ್ಗೆ ಸುಮಾರು ₹ 8.40 ರಷ್ಟು ಏರಿಕೆಯಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ ಪ್ರತಿ ಲೀಟರಿಗೆ 40 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ಲೀಟರ್ ಗೆ 103.81 ರೂ. ಇದ್ದರೆ ಡೀಸೆಲ್ ಲೀಟರ್ ಗೆ 95.07 ರೂ ರೂ. ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ, ಪೆಟ್ರೋಲ್ 84 ಪೈಸೆ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 43 ಪೈಸೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ 118.83 ರೂ. ಇದ್ದರೆ ಡೀಸೆಲ್ ಬೆಲೆ ಲೀಟರ್ ಗೆ 103.07 ರೂ.ಇದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 109.34 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.42 ರೂಪಾಯಿ ಇದೆ.  ಕೋಲ್ಕತ್ತಾ ದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 113.03 ರೂ. ಡೀಸೆಲ್ ಬೆಲೆ ಲೀಟರ್​ಗೆ 97.82 ರೂ. ಆಗಿದೆ.