Wednesday, 11th December 2024

41,195 ಮಂದಿಗೆ ಹೊಸದಾಗಿ ಸೋಂಕು ದೃಢ

#corona

ನವದೆಹಲಿ : ಭಾರತದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 41,195 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 41,195 ಮಂದಿಗೆ ಹೊಸದಾಗಿ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 32,077,706 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಸೋಂಕಿಗೆ 490 ಜನರು ಮೃತಪಟ್ಟಿದ್ದು, ಈ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 4,29,669 ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯು 387,987 ಕ್ಕೆ ಇಳಿದಿದೆ. ಗುರುವಾರದ ವರೆಗೆ 31,260,050 ಜನರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.