ನವದೆಹಲಿ: ಕರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 30,570 ಕರೋನಾ ಪ್ರಕರಣಗಳು ದೃಢಪಟ್ಟಿದ್ದು, 431 ಮಂದಿ ಮೃತಪಟ್ಟಿದ್ದಾರುವುದ ವರದಿಯಾಗಿದೆ.
ಒಟ್ಟು ಸೋಂಕಿತರ ಸಂಖ್ಯೆ 3,33,47,325ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,43,928ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,42,923ಕ್ಕೆ ತಲುಪಿದೆ. 38,303 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,25,60,474ಕ್ಕೆ ತಲುಪಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 76,57,17,137 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.