Saturday, 23rd November 2024

ಸೋಂಕು ಮತ್ತೆ ಏರಿಕೆ: 41,965 ಕೋವಿಡ್‌ ಪ್ರಕರಣಗಳು ದೃಢ

ನವದೆಹಲಿ: ಇಳಿಕೆಯ ಹಾದಿಯಲ್ಲಿದ್ದ ಮಹಾಮಾರಿ ಕರೋನಾ ಸೋಂಕು ಮತ್ತೆ ಏರಿಕೆಯಾಗಲು ಆರಂಭವಾಗಿದ್ದು, ಬುಧವಾರ ಬೆಳಗ್ಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 41,965 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 460 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,78,181ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 33,964 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,19,93,644ಕ್ಕೆ ತಲುಪಿದೆ.

16,06,785 ಮಂದಿಯನ್ನು ಕರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 52,31,84,293 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಒಟ್ಟಾರೆ 65,41,13,508 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.