Tuesday, 15th October 2024

42,015 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆ

#corona

ನವದೆಹಲಿ: ಭಾರತದಲ್ಲಿ ಕರೋನಾ 2ನೇ ಅಲೆಯ ಏರಿಳಿತ ಮುಂದುವರೆದಿದ್ದು, ಬುಧವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 42,015 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಬರೋಬ್ಬರಿ 3,998 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,12,16,337ಕ್ಕೆ ತಲುಪಿದ್ದು, ಸಾವಿನ 4,18,480ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,07,170ಕ್ಕೆ ಕುಸಿದಿದೆ.

ಭಾರತದಲ್ಲಿ ಒಂದೇ 18,52,140 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 44,91,93,273 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ, ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 41,54,72,455 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.