Tuesday, 10th December 2024

42,640 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕೋವಿಡ್ ಎರಡನೇ ಅಲೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 42,640 ಕೋವಿಡ್ ಪ್ರಕರಣ ಪತ್ತೆಯಾಗಿದೆ.

90 ದಿನಗಳ ಬಳಿಕ ದೇಶದಲ್ಲಿ 50 ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದ್ದು, ಪ್ರಕರಣಗಳ ಸಂಖ್ಯೆ 6.24 ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಹೇಳಿದೆ.

ಕಳೆದ 24 ಗಂಟೆಯಲ್ಲಿ 1,167 ಮಂದಿ ಮೃತಪಟ್ಟಿದ್ದಾರೆ. 81,839 ಜನರು ಕೋವಿಡ್’ನಿಂದ ಗುಣಮುಖರಾಗಿದ್ದಾರೆ. ಭಾರತದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 2.99 ಕೋಟಿಗೆ ಏರಿಕೆಯಾಗಿದೆ.