Sunday, 15th December 2024

ಇಳಿಕೆ ಕಾಣದ ಕರೋನಾ: 42,982 ಹೊಸ ಸೋಂಕು ಪ್ರಕರಣಗಳು ಪತ್ತೆ

#corona

ನವದೆಹಲಿ: ಕಳೆದ 24 ಗಂಟೆಗಳಲ್ಲಿ 42,982 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಮತ್ತೆ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ.

ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 3,18,12,114ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 533 ಮಂದಿ ಸೋಂಕಿತರು ಮೃತಪಟ್ಟಿದ್ದು, ಸೋಂಕಿಗೆ ಬಲಿ ಯಾದವರ ಸಂಖ್ಯೆ 4,26,290ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 41,726 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಈ ವರೆಗೂ ಗುಣಮುಖರಾದವರ ಸಂಖ್ಯೆ 3,09,74,748ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,11,076 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶಾದ್ಯಂತ 16,64,030 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ದೇಶದಲ್ಲಿ ಈ ವರೆಗೂ ನಡೆಸಿದ ಕೋವಿಡ್ ಪರೀಕ್ಷೆಗಳ ಸಂಖ್ಯೆ 47,48,93,363ಕ್ಕೆ ಏರಿಕೆಯಾಗಿದೆ. ಅಂತೆಯೇ ದೇಶದಲ್ಲಿ 48,93,42,295 ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ.