Thursday, 12th December 2024

`43,393 ಜನರಲ್ಲಿ ಸೋಂಕು ಪತ್ತೆ, 911 ಬಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 43,393 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,07,52,950ಕ್ಕೆ ತಲುಪಿದೆ. 911 ಜನರು ಮಹಾಮಾರಿಗೆ ಬಲಿಯಾಗಿದ್ದು, ಈ ಸಂಖ್ಯೆ 4,05,939ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,58,727 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,98,88,284 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 44,459 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

36,48,47,549 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.