Sunday, 1st December 2024

ಕರೋನಾ ವೈರಸ್’ನ ಏರಿಳಿತ: 43,509 ಮಂದಿಯಲ್ಲಿ ಸೋಂಕು ಪತ್ತೆ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ವೈರಸ್’ನ ಏರಿಳಿತ ಮುಂದುವರೆದಿದೆ. ದೇಶದಲ್ಲಿ ಗುರುವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 43,509 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 640 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 31,528,114ಕ್ಕೆ ತಲುಪಿದ್ದು, ಸಾವಿನ 4,22,662ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,03,840ಕ್ಕೆ ಕುಸಿದಿದೆ.

ಕಳೆದ 24 ಗಂಟೆಗಳಲ್ಲಿ 38,465 ಮಂದಿ ಗುಣಮುಖರಾಗುವುದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 3,06,59,934ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 17,28,795 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, 46,26,29,773 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 44,19,12,395 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.