ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದ್ದು, ದೇಶದಲ್ಲಿಂದು ಸೋಮವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 4,362 ಕೋವಿಡ್ ಪ್ರಕರಣಗಳು ಪತ್ತೆಯಾಗಿ, 66 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,67,315ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಡುವವರ ಸಂಖ್ಯೆ 5,14,922ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 54,118ಕ್ಕೆ ಇಳಿಕೆಯಾಗಿದೆ
ಕಳೆದ 24 ಗಂಟೆಗಳಲ್ಲಿ 9,620 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,23,98,095ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,78,90,61,887 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.