ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ 44 ಕ್ಷೇತ್ರಗಳಲ್ಲಿ ಶನಿವಾರ ನಾಲ್ಕನೇ ಹಂತದ ಮತದಾನ ನಡೆಯಲಿದೆ.
ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಪಶ್ಚಿಮ ಬಂಗಾಳದ ಸಚಿವರಾದ ಪಾರ್ಥ ಚಟರ್ಜಿ, ಅನೂಪ್ ಬಿಸ್ವಾಸ್ ಸೇರಿದಂತೆ ಹಲವು ಮುಖಂಡರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.
ಕೋಚ್ ಬೆಹಾರ್, ಅಲಿಪುರ್ದಾರ್ , ಹೌರಾ, ಹೂಗ್ಲಿ ಸೇರಿದಂತೆ ಇನ್ನಿತರ ಕಡೆಗಳಲ್ಲಿ 44 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಆಯೋಗ ಸಕಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. 15, 940 ಮತಗಟ್ಟೆಗಳ ವ್ಯವಸ್ಥೆ ಮಾಡಲಾಗಿದ್ದು, ಅರೆಸೇನಾ ಪಡೆಯ 789 ತುಕಡಿಗಳನ್ನು ನಿಯೋಜಿಸಲಾಗಿದೆ. ಕೋಚ್ ಬೆಹಾರ್ ನಲ್ಲಿ ಅತಿ ಹೆಚ್ಚು 187 ಅರೆಸೇನಾ ಪಡೆಯ ತುಕಡಿಗಳನ್ನು ನಿಯೋಜಿಸಲಾಗಿದೆ.
ಇವಿಎಂ ಮತ್ತಿತರ ಚುನಾವಣೆ ಸಲಕರಣೆ ವಿತರಣೆ ಪ್ರಕ್ರಿಯೆ ಆರಂಭವಾಗಿದೆ. ಸುಮಾರು ಏಳು ಸಾವಿರ ಮತಗಟ್ಟೆ ಸಿಬ್ಬಂದಿ ಯನ್ನು ಜಿಲ್ಲಾಡಳಿತದಿಂದ ನೇಮಕ ಮಾಡಿಕೊಳ್ಳಲಾಗಿದೆ.