ಈಶಾನ್ಯ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 535 ಆಗಿರುವುದಾಗಿ ಎಂದು ರಾಜ್ಯ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರಡಿಸಿರುವ ಹೇಳಿಕೆಯಲ್ಲಿ ತಿಳಿಸಿದೆ.
ಮಿಜೋರಾಂನಲ್ಲಿ ಸದ್ಯ 1,847 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲಿ 238 ಸೋಂಕಿತರು ಸೇರಿದಂತೆ ಇಲ್ಲಿಯವರೆಗೂ 1,37,761 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್ ನಲ್ಲಿ ಓಮಿಕ್ರಾನ್ ಪತ್ತೆಯಾದ ನಂತರ ವಿವಿಧ ರಾಷ್ಟ್ರಗಳಿಂದ 139 ಜನರು ಮಿಜೋರಾಂಗೆ ಆಗಮಿಸಿರುವುದಾಗಿ ಮತ್ತೊಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.