ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 44,230 ಮಂದಿಗೆ ಹೊಸದಾಗಿ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 44,230 ಮಂದಿಗೆ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,15,72,344 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 555 ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಮೃತರ ಸಂಖ್ಯೆ 4,23,217ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 4,05,155 ಸಕ್ರಿಯ ಪ್ರಕರಣಗಳಿವೆ. ಒಟ್ಟು ಪ್ರಕರಣಗಳು: 3,15,72,344 ಗಳಿದ್ದು, ಸಕ್ರಿಯ ಪ್ರಕರಣಗಳು: 4,05,155 ರಷ್ಟಿದೆ.