Saturday, 23rd November 2024

4435 ಜನರಲ್ಲಿ ಹೊಸ ಕರೋನಾ ಸೋಂಕು ಪತ್ತೆ

ವದೆಹಲಿ: ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 4435 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 530916 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 23091 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 44179712 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 220,66,16,373 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,31,086 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.